ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಯ ಪ್ರಾರಂಭೋತ್ಸವ

0

ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ – ಉಚಿತ ಪುಸ್ತಕ ವಿತರಣೆ

ಅಮರಮೂಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಯ ನೂತನ ಶೈಕ್ಷಣಿಕ ವರ್ಷದ ಹೊಸ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಸಲುವಾಗಿ ಶಾಲಾಪ್ರಾರಂಭೋತ್ಸವ ಕಾರ್ಯಕ್ರಮ
ಮೇ.31 ರಂದು ನಡೆಯಿತು.

ಈ ಸಂದರ್ಭದಲ್ಲಿ
ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಮಾಜಿ ಸಚಿವ ಎಸ್.ಅಂಗಾರ ರವರ ಅಧ್ಯಕ್ಷತೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ನಡೆಯಿತು.
ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಾದ ರೇಣುಕಾ ಎನ್,
ದೀಪ್ತಿ ಪಿ,ಶ್ರೀಹಸ್ತಾ ಕೆ.ಎಸ್,ಹರ್ಷಿತಾ ಕೆ,ರಚಿತಾ ಎಂ.ಪಿ, ನಿತೇಶ್ ಬಿ,ಮನ್ವಿತ್ ಎಂ.ಪಿ‌ ಸನ್ಮಾನಿಸಲಾಯಿತು. ಪ್ರಥಮ ಶ್ರೇಣಿ, ದ್ವಿತೀಯ,ತೃತೀಯ ಶ್ರೇಣಿ ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿಅಭಿನಂದಿಸಲಾಯಿತು. ವೇದಿಕೆಯಲ್ಲಿ ಶಾಲಾ ಸಂಚಾಲಕ ರಾಧಾಕೃಷ್ಣ ಬೊಳ್ಳೂರು,ಕಾರ್ಯದರ್ಶಿ ತೇಜಸ್ವಿ ಕಡಪಳ
ಉಪಾಧ್ಯಕ್ಷ ಅಣ್ಣಾಜಿ ಗೌಡ, ಖಜಾಂಜಿ
ಹರ್ಷವರ್ಧನ ಬೊಳ್ಳೂರು,
ನಿರ್ದೇಶಕರಾದ
ಆನಂದ ಗೌಡ ಚಿಲ್ಪಾರು, ಸತ್ಯಪ್ರಸಾದ್ ಪುಳಿಮಾರಡ್ಕ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಮೂಕಮಲೆ,
ಪ್ರೌಢಶಾಲೆಯ
ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರತಿಭಾ ಎಸ್ ಆಳ್ವ ಬೆಳ್ಳಾರೆ
ಉಪಸ್ಥಿತರಿದ್ದರು.

8,9 ಮತ್ತು 10 ನೇಯ ತರಗತಿಯ ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲ್ಪಡುವ ಉಚಿತ ಪುಸ್ತಕ ವಿತರಿಸಲಾಯಿತು. ಶಾಲಾವಿದ್ಯಾರ್ಥಿಗಳಾದ ಕು.ಶರಣ್ಯ‌ ಕೆ.ಎನ್,ಪವಿತ್ರ ಎನ್,ತೃಪ್ತಿ ಪಿ ಪ್ರಾರ್ಥಿಸಿದರು. ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು.
ಸಹಶಿಕ್ಷಕ ಹರಿಪ್ರಸಾದ್ ವಂದಿಸಿದರು. ಶಿಕ್ಷಕಿ ಶ್ರೀಮತಿ ಸಂಧ್ಯಾಕುಮಾರಿ ಕಾರ್ಯಕ್ರಮ ನಿರೂಪಿಸಿದರು.