ಆಲೆಟ್ಟಿ ನಾರ್ಕೋಡು ಸರಕಾರಿ ಶಾಲೆಯಲ್ಲಿ ಪ್ರಾರಂಭೋತ್ಸವ

0

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಆಲೆಟ್ಟಿ (ನಾರ್ಕೋಡು)ಯಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವು ಮೇ.31 ರಂದು ನಡೆಯಿತು.
ನೂತನವಾಗಿ ದಾಖಲುಗೊಂಡ ವಿದ್ಯಾರ್ಥಿಗಳನ್ನು ಪೆನ್ನು ಮತ್ತು ಪೆನ್ಸಿಲ್ ನೀಡಿ ಬರಮಾಡಿಕೊಳ್ಳಲಾಯಿತು.

ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಎರಡು ಜತೆ ಉಚಿತ ಸಮವಸ್ತ್ರ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುನಂದ ರವರು ನೂತನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಹುಕ್ರಪ್ಪ ಪೂಜಾರಿ ಶುಭಹಾರೈಸಿದರು. ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಸಿಹಿಯೂಟ ನೀಡಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.