ಕೆವಿಜಿ‌ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

0

ಕೆವಿಜಿ‌ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ 2024 ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮೇ. 31ರಂದು ಕಾಲೇಜಿನ ಪರಿಕ್ಷಾ ಹಾಲ್ ನಲ್ಲಿ ನಡೆಯಿತು.
ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಪ್ರಸೂತಿ ತಜ್ಞೆ ಹಾಗೂ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಗೀತಾ ದೊಪ್ಪ, ಇಜಿ ಕಮಿಟಿ ಕೋ‌ ಆರ್ಡಿನೇಟರ್ ಡಾ. ಮಹೇಶ್ ಬಾಬು, ಕಮ್ಯೂನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥರಾದ ಡಾ. ಪಿ.ವಿ. ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿದ್ದ ಡಾ. ರವಿಶಂಕರ್ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನಾಯಕ ಅರ್ಜುನ್ ವಂದಿಸಿದರು. ಶಮಾ ಕೆ ಪ್ರಾರ್ಥಿಸಿದರು. ಅನ್ನಪೂರ್ಣೇಶ್ವರಿ ಮತ್ತು ದೀಪಾ ಕಾರ್ಯಕ್ರಮ ನಿರೂಪಿಸಿದರು.