ಚೆಂಬು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

0

ಚೆಂಬು ಸರಕಾರಿ ಪ್ರೌಡ ಶಾಲೆಯಲ್ಲಿ ನೂತನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಮತ್ತು 8ನೇ ತರಗತಿ ವಿದ್ಯಾರ್ಥಿ ಗಳ ಸ್ವಾಗತ ಕಾರ್ಯಕ್ರಮವು ಮೇ.31ರಂದು ನಡೆಯಿತು.
ನೂತನ ಶಾಲಾ ವಿದ್ಯಾರ್ಥಿಗಳನ್ನು ಹೂಗುಚ್ಚ ನೀಡಿ ಸ್ವಾಗತಿಸಲಾಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು,ಶಾಲಾ ಶಿಕ್ಷಕ ವೃಂದ,ಸಿಬ್ಬಂದಿ ವರ್ಗ,ಪೋಷಕರು ಉಪಸ್ಥಿತರಿದ್ದರು.