ನಾಗಪಟ್ಟಣ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾ ಪ್ರಾರಂಭೋತ್ಸವ

0

ಆಲೆಟ್ಟಿ ಕ್ಲಸ್ಟರ್ ನ ನಾಗಪಟ್ಟಣ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 31 ರಂದು 2024 – 25 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಬಲೂನ್ ನೀಡಿ , ಸಿಹಿ ಹಂಚಿ ತರಗತಿಗೆ ಬರಮಾಡಿಕೊಳ್ಳಲಾಯಿತು.


ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪ. ಎಂ ಇವರು ನೂತನ ಶೈಕ್ಷಣಿಕ ವರ್ಷದ ಶಾಲಾ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಇದರ ಜೊತೆಗೆ ನಾಗಪಟ್ಟಣ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿರುವ ಗೋಪಾಲ ಕೃಷ್ಣರು ನೀಡಿರುವ ನೋಟ್ ಪುಸ್ತಕ, ಪೆನ್, ಪೆನ್ಸಿಲ್ ಇತ್ಯಾದಿ ಕಲಿಕೆಗೆ ಸಂಬಂಧಿಸಿದ ಕಲಿಕಾ ಸಾಮಗ್ರಿಗಳನ್ನು ಶಾಲೆಯ ಹಿರಿಯ ವಿದ್ಯಾರ್ಥಿಯಾಗಿರುವ ದಿನೇಶ್ ಕೋಲ್ಚಾರ್ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು, ಎಲ್ಲಾ ಸದಸ್ಯರುಗಳು, ಪೋಷಕರು, ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದರು. ಮಧ್ಯಾಹ್ನ ಬಿಸಿಯೂಟದೊಂದಿಗೆ ಸಿಹಿಯೂಟವನ್ನು ನೀಡಲಾಯಿತು.