ಸಂಪಾಜೆಯ ಆರ್.ಎಂ.ಎಸ್. ಶಾಲೆಯಲ್ಲಿ 2024 – 2025ನೇ ಸಾಲಿನ ನೂತನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಮೇ.31ರಂದು ನಡೆಯಿತು.
ಶಾಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ನೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು. ಇಲಾಖೆಯಿಂದ ಉಚಿತವಾಗಿ ನೀಡಿದ ಪುಸ್ತಕಗಳನ್ನು ಮತ್ತು ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.
ಸಂಪಾಜೆ ವರ್ತಕರ ಸಂಘದ ಅಧ್ಯಕ್ಷ ಚಕ್ರಪಾಣಿ ಯು. ಬಿ. ಅವರು ವಿದ್ಯಾರ್ಥಿಗಳಿಗೆ ಪಾಯಸ ಊಟವನ್ನು ನೀಡಿದರು.
ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಭಾಗವಹಿಸಿದ ಪೋಷಕರಿಗೆ ಹಾಗೂ ಎಸ್. ಡಿ. ಎಂ. ಸಿ. ಸದಸ್ಯರಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರು, ಎಸ್. ಡಿ. ಎಂ. ಸಿ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರು , ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.
ವಿಶ್ವ ತಂಬಾಕುರಹಿತ ದಿನದ ಅಂಗವಾಗಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳ ಅವರು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು.