ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಸಿ ಎಚ್ ಅವರು ಮೇ.31 ರಂದು ನಿವೃತ್ತಿ ಹೊಂದಿದ್ದು ಅವರನ್ನು ಸಂಸ್ಥೆಯ ವತಿಯಿಂದ ಬೀಳ್ಕೊಡಲಾಯಿತು.
ಈ ಸಂದರ್ಭ ಸ್ಮರಣೆಕೆ, ಶಾಲು ಹಾರ ಹಾಕಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷರಾದ ಎ.ವಿ ತೀರ್ಥರಾಮ, ಮುಳಿಯ ಕೇಶವ ಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ, ಸಂಘದ ಸದಸ್ಯ ಮಣಿಕುಮಾರ್ ಮುಂಡೋಡಿ, ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.