ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಶಾಲಾ ಪ್ರಾರಂಭೋತ್ಸವ

0

ನಮ್ಮ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮವು sdmc ಅಧ್ಯಕ್ಷರಾದ ಅಬ್ದುಲ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಮುಖ್ಯ ಗುರುಗಳು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ನುಡಿದರು ಸಭೆಯ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ಸಮವಸ್ತ್ರಗಳನ್ನು ವಿತರಿಸಿದರು.

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ರೈ ಹಾಗೂ sdmc ಉಪಾಧ್ಯಕ್ಷರಾದ ಸುನಿತಾ ರವರು ಉಪಸ್ಥಿತರಿದ್ದರು.ಶ್ರೀಮತಿ ಸುರೇಖಾ ರವರು ಕಾರ್ಯಕ್ರಮ ನಿರೂಪಿಸಿದರು.

ಕುಮಾರಿ ಗುಲಾಬಿ ಮೇಡಂ ಅವರು ಧನ್ಯವಾದ ಅರ್ಪಿಸಿದರು. ಹಿರಿಯ ಶಿಕ್ಷಕಿ ಶ್ರೀಮತಿ ಶಾಂತಮ್ಮ ಹಾಗೂ ಗೌರವ ಶಿಕ್ಷಕಿಯಾದ ಸೌಮ್ಯ ಲತಾ ಮತ್ತು sdmc ಯ ಪದಾಧಿಕಾರಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.