ದ.ಕ.ದಲ್ಲಿ ಚೌಟ – ಉಡುಪಿಯಲ್ಲಿ ಕೋಟ ಭರ್ಜರಿ ಮುನ್ನಡೆ ಹಿನ್ನೆಲೆ

0

ಮಂಗಳೂರಿನ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ

ದೇಶದ 18ನೇ ಲೋಕಸಭಾ ಚುನಾವಣೆಯಲ್ಲಿ ದ.ಕ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಸುಮಾರು ಒಂದು ಲಕ್ಷಕ್ಕೂ ಅಧಿಕ ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದು, ಗೆಲುವಿನ ಸನಿಹದಲ್ಲಿದ್ದು, ಮಂಗಳೂರಿನ ಮತದಾನ ಕೇಂದ್ರದ ಬಳಿ ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.

ದ.ಕ. ದಲ್ಲಿ ಬಿಜೆಪಿಯ ಕ್ಯಾಪ್ಟನ್ ಬ್ರಿಜೇಶ್ ಚೌಟರು ಒಂದು ಲಕ್ಷದ ಮೂವತ್ತು ಸಾವಿರಕ್ಕೂ ಅಧಿಕ ಮತ ಪಡೆದು ಮುನ್ನಡೆ ಸಾಧಿಸಿದ್ದು, ಗೆಲುವಿನ ಘೋಷಣೆಯೊಂದೆ ಬಾಕಿಯಾಗಿದೆ.