2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಇಂದು ಬಂಧಿಸಿದೆ.
ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಕಳೆದ ತಿಂಗಳು ಮನ್ಸೂರ್ ಪಾಷಾ ಜತೆಗೆ ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಒಂದು ತಿಂಗಳ ನಂತರ ಈ ಬಂಧನವಾಗಿದೆ.