ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಮೋಹನ್ ಬಾಬು ರಿಂದ ಗಿಡ ನೆಟ್ಟು ಪರಿಸರ ಉಳಿವಿಗೆ ಕರೆ
ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ
ವಿಶ್ವ ಪರಿಸರ ದಿನಾಚರಣೆಯನ್ನು ಆಲೆಟ್ಟಿ ಗ್ರಾಮದ ಕೂಟೇಲು ಅರಣ್ಯ ಪ್ರದೇಶದಲ್ಲಿ ಇಂದು ಹಮ್ಮಿಕೊಳ್ಳಲಾಯಿತು.
ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಮೋಹನ್ ಬಾಬು ರವರು ಅರಣ್ಯ ಪ್ರದೇಶದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಸುಳ್ಯ ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾವಸಂತ ಆಲೆಟ್ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ,
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷಕರುಣಾಕರಹಾಸ್ಪಾರೆ,ವಲಯಅರಣ್ಯಾಧಿಕಾರಿ ಮಂಜುನಾಥ ಎನ್, ಎ.ಸಿ.ಎಫ್ ಶಿವಾನಂದ, ವಕೀಲರಾದ ನಾರಾಯಣ ಎಮ್, ಹರೀಶ್ ಬೂಡುಪನ್ನೆ ಉಪಸ್ಥಿತರಿದ್ದರು.
ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಮತ್ತು ಗ್ರಾಮಸ್ಥರು ಜತೆಯಲ್ಲಿದ್ದರು.
ಪರಿಸರ ನಮ್ಮ ಜೀವನದಲ್ಲಿ ಎಷ್ಟು ಮುಖ್ಯವಾಗಿದೆ ಎಂಬ ಅರಿವು ಮೂಡಿಸುವ ಸದುದ್ದೇಶದಿಂದ
ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಮಡಿಕೇರಿ ಮತ್ತು ಸುಳ್ಯದಂತಹ ಭಾಗದಲ್ಲಿ ಕಳೆದ ಬಾರಿ ಸಂಭವಿಸಿದ ಅನಾಹುತ ಪ್ರಕೃತಿ ನಾಶದಿಂದ ಆಗಿರುವುದಕ್ಕೆ ಸಾಕ್ಷಿಯಾಗಿದೆ.
ಪ್ರಕೃತಿಯಲ್ಲಿ ಉಂಟಾಗುತ್ತಿರುವ ವಿಕೋಪಗಳನ್ನು ತಡೆಗಟ್ಟಬೇಕಾದರೆ ಗಿಡಗಳನ್ನು ನೆಟ್ಟು ಬೆಳೆಸಿ ಉಳಿಸುವ ಕಾರ್ಯದಲ್ಲಿ ಸಾರ್ವಜನಿಕರು ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಸಿವಿಲ್ ನ್ಯಾಯಾಧೀಶರು ಕರೆ ನೀಡಿದರು.
ವಿಶ್ವ ಪರಿಸರ ದಿನದಂದು ಆಲೆಟ್ಟಿ ಗ್ರಾಮ ವ್ಯಾಪ್ತಿಯಲ್ಲಿ
ಸುಮಾರು 10 ಎಕ್ರೆ ಪ್ರದೇಶದಲ್ಲಿ 1600 ಗಿಡಗಳನ್ನು ನೆಡುವ ದೊಡ್ಡ ಮಟ್ಟದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ – ಮಂಜುನಾಥ ವಲಯ ಅರಣ್ಯಅಧಿಕಾರಿ