ಬ್ಯಾಂಕ್ ಆಫ್ ಬರೋಡಾದಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಆಶ್ರಯದಲ್ಲಿ ಅರಿವು ಕೃಷಿ ಕ್ಲಿನಿಕ್ ಸುಳ್ಯ, ಗ್ರಾ.ಪಂ. ಜಾಲ್ಸೂರು, ಕನಕಮಜಲು ಪ್ರಾ.ಕೃ.ಪ.ಸ.ಸಂಘ ಜಾಲ್ಸೂರು, ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟ ಜಾಲ್ಸೂರು ಇವರ ಸಹಯೋಗದೊಂದಿಗೆ ಮಳೆನೀರು ಕೊಯ್ಲು ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಾಗಾರ ಜೂ. 6ರಂದು ಜಾಲ್ಸೂರು ಗ್ರಾ.ಪಂ. ಸಭಾಭವನದಲ್ಲಿ ನಡೆಯಲಿದೆ.
ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಪಿ.ಶಿವಾನಂದ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ತಿರುಮಲೇಶ್ವರಿ ಮರಸಂಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಅರಿವು ಕೃಷಿ ಕ್ಲಿನಿಕ್‌ನ ಹೊನ್ನಪ್ಪ ಗೌಡ ಬನ್ನೂರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನಕಮಜಲು ಸೊಸೈಟಿ ಅಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಬ್ಯಾಂಕ್ ಆಫ್ ಬರೋಡಾ ಸುಳ್ಯ ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕ ಅಶೋಕ್ ವಿಮಾನ್, ಜಾಲ್ಸೂರು ಗ್ರಾ.ಪಂ. ಪಿಡಿಒ ಚೆನ್ನಪ್ಪ ನಾಯ್ಕ್, ಎನ್‌ಆರ್‌ಎಲ್‌ಎಂ ಸುಳ್ಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಶ್ವೇತಾ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಅಧ್ಯಕ್ಷ ಯಶ್ವಿತ್ ಕಾಳಂಮನೆ, ಕಾರ್ಯದರ್ಶಿ ತಿರುಮಲೇಶ್ವರಿ ಅರ್ಭಡ್ಕ ಉಪಸ್ಥಿತರಿರುವರು.
ಮಳೆ ನೀರು ಕೊಯ್ಲು ಘಟಕದ ಉಪಯೋಗಗಳು :
ಛಾವಣಿ ಮಳೆ ನೀರು ಸಂಗ್ರಹ, ಅಂತರ್ಜಲ ಮರುಪೂರಣ, ನೀರು ನಿಲ್ಲುವ ಸಮಸ್ಯೆಗಳಿಗೆ ಪರಿಹಾರ, ಬೋರ್‌ವೆಲ್ ಮರುಪೂರಣ, ತೆರೆದ ಬಾವಿ ಮರುಪೂರಣ, ಬರಡು ಭೂಮಿ ಕೃಷಿಗೆ ಅಭಿವೃದ್ಧಿ