ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಸುಳ್ಯದ ವಿಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ. 5ರಂದು ಆಚರಿಸಲಾಯಿತು. ಪರಿಸರ ದಿನಾಚರಣೆ ಅಂಗವಾಗಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಕಾಲೇಜಿನ ಮೂಲಿಕಾ ಉದ್ಯಾನವನದಲ್ಲಿ ಔಷಧೀಯ ಸಸ್ಯಗಳನ್ನು ನೆಡಲಾಯಿತು.

ಪರಿಸರ ಸಂರಕ್ಷಣೆಯ ಕುರಿತು ಕಾಲೇಜಿನ ಭೋದಕ ಬೋಧಕೇತರ ವೃಂದದವರಿಗೆ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ, ವಿಧ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ, ರಾಷ್ಟ್ರೀಯ ಸೇವಾ ಘಟಕದ ಯೋಜನಾಧಿಕಾರಿ ಡಾ. ಪ್ರಮೋದ್ ಪಿ.ಎ., ದ್ರವ್ಯಗುಣ ವಿಭಾಗದ ಮುಖ್ಯಸ್ಥರು, ಸಂಸ್ಥೆಯ ಭೋಧಕ ಬೋಧಕೇತರ ವರ್ಗದವರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕರು ಭಾಗವಹಿಸಿದರು.