ಕನ್ನಡ ಮಾಧ್ಯಮ ಎಂಬ ಅಳುಕು ಬಿಟ್ಟು ಬಿಡಿ. P-Q-R-S -T ಸೂತ್ರವನ್ನು ಪಾಲಿಸಿ – ಡಾ| ರಾಧಿಕಾ.ಡಿ
ಓದುವಿಕೆಯಲ್ಲಿ ಕಠಿಣ ಶ್ರಮ ಅಗತ್ಯ. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಉತ್ತಮ ಸಂಸ್ಕಾರಗಳನ್ನೂ ರೂಢಿಸಿಕೊಳ್ಳಿ” ಕನ್ನಡ ಮಾಧ್ಯಮ ಎಂಬ ಅಳುಕು ಬಿಟ್ಟು ಬಿಡಿ. P-Q-R-S -T ಸೂತ್ರವನ್ನು ಪಾಲಿಸಿ ಎಂದು ಶಾಲೆಯ ಹಿರಿಯ ವಿದ್ಯಾರ್ಥಿ, ಮೈಸೂರಿನಲ್ಲಿ ಅರಿವಳಿಕೆ ಮತ್ತು ನೋವು ನಿವಾರಣಾ ತಜ್ಞೆ ಡಾ| ರಾಧಿಕಾ ಡಿ ಹೇಳಿದರು. ಇವರು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂ. 8ರಂದು ನಡೆದ SSLC ಯ 2024ರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ವಿದ್ಯಾ ಬೋಧಿನೀ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ರಾಧಾಕೃಷ್ಣರಾವ್ ಯು ವಹಿಸಿದ್ದರು.
ಸಂಚಾಲಕರಾದದ ಪಿ.ಜಿ.ಎಸ್.ಎನ್ ಪ್ರಸಾದ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಪಾವನ ಜೋಗಿಬೆಟ್ಟು, ಸದಸ್ಯೆ ಶ್ರೀಮತಿ ತ್ರಿವೇಣಿ ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ನಿರ್ಮಲ ಚಂದ್ರಶೇಖರ್ ಹಾಗೂ ರಕ್ಷಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್ ಉಪಸ್ಥಿತರಿದ್ದರು. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನಿಗಳಾದ ಪ್ರತೀಕಾ ಕೆ..ಎಂ ಮತ್ತು ಶಿವಕೃಷ್ಣ ಎನ್ ಇವರಿಗೆ ವಿಶೇಷ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಕೃತ ಭಾಷಾ ಶಿಕ್ಷಕರಾದ ವೆಂಕಟೇಶ್ ಕುಮಾರ್ ಯು ಪ್ರತಿಭಾನ್ವಿತರನ್ನು ಪರಿಚಯಿಸಿದರು. ಇದೇ ಸಂದರ್ಭದಲ್ಲಿ ವಿವಿಧ ದತ್ತಿನಿಧಿ ನಗದು ಬಹುಮಾನಗಳನ್ನು ವಿತರಿಸಲಾಯಿತು. ಇದರ ಪಟ್ಟಿಯನ್ನು ಸಹಶಿಕ್ಷಕಿ ಕವಿತಾ ಕೆ.ಎನ್ ವಾಚಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಯಶೋಧರ ಎನ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣಿತ ಶಿಕ್ಷಕರಾದ ಉದಯಕುಮಾರ್ ರೈ ಎಸ್ ವಂದಿಸಿದರು. ಹತ್ತನೇ ತರಗತಿಯ
ಕ್ಷಮಾ ಮತ್ತು ಜಸ್ವಿತಾ ಕಾರ್ಯಕ್ರಮ ನಿರೂಪಿಸಿದರು.