ಅರಂತೋಡು ಮದರಸದಲ್ಲಿ ಪೋಷಕರ ಸಭೆ

0


ಅರಂತೋಡು ನುಸ್ರತುಲ್ ಇಸ್ಲಾಂ ಮದರಸದಲ್ಲಿ ವಿದ್ಯಾರ್ಥಿಗಳ ಪೋಷಕರ ಸಭೆಯು ಮೇ. 09 ರಂದು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಮುಫದ್ಧೀಸ್ ಬಹು| ಹಂಝ ಫೈಝಿ ಕಣ್ಣೂರು ಆಗಮಿಸಿ ವಿಷಯ ಮಂಡಿಸಿದರು. ಸದರ್ ನೌಶಾದ್ ಅಝ್ ಹರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಜಮಾಅತ್ ಕಾರಯದರ್ಶಿ ಕೆ.ಎಂ ಮೂಸಾನ್, ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ನಿರ್ದೇಶಕರಾದ ಎ. ಹನೀಫ್ , ಮುಜೀಬ್, ನಿವ್ರತ್ತ ಉಪನ್ಯಾಸಕ ಹಾಜಿ ಅಬ್ದುಲ್ಲ ಮೊದಲಾದವರು ಉಪಸ್ಥಿತರಿದ್ದರು. ಮದರಸ ಮ್ಯಾನೇಜ್ ಮೆಂಟ್ ಸಂಚಾಲಕ ಅಮೀರ್ ಕುಕ್ಕುಂಬಳ ಸ್ವಾಗತಿಸಿ ನಿರೂಪಿಸಿದರು. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.