ಸುಳ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ತೆರೆದ ಮನೆ ವಿಶೇಷ ಕಾರ್ಯಕ್ರಮ

0

ಠಾಣಾ ಉಪನಿರೀಕ್ಷಕಿ ಸರಸ್ವತಿ ರವರಿಂದ ಮಾಹಿತಿ ಕಾರ್ಯಗಾರ

ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾನೂನು ಮಾಹಿತಿ ಕಾರ್ಯಗಾರ ವಿಶೇಷ ಕಾರ್ಯಕ್ರಮ ಜೂನ್ 10 ರಂದು ನಡೆಯಿತು.
ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸರಸ್ವತಿಯವರು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೋಸ್ಕೋ ಕಾಯ್ದೆಗಳ ಬಗ್ಗೆ, ಮಾದಕ ವ್ಯಸನಗಳಿಂದ ಉಂಟಾಗುವ ತೊಂದರೆಗಳ ಬಗ್ಗೆ,ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಜಾಗೃತಿ ಅರಿವನ್ನು ಮೂಡಿಸಿ ವಿದ್ಯಾರ್ಥಿಗಳಲ್ಲಿ ಧೈರ್ಯವನ್ನು ತುಂಬಿದರು. ಬಳಿಕ ಠಾಣೆಯ ಕಾರ್ಯ ಚಟುವಟಿಕೆಗಳು,ಠಾಣೆಯ ಪರಿಸರ ವೀಕ್ಷಣೆಗೆ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲಾಯಿತು.


ಸುಳ್ಯ ಸರ್ಕಾರಿ ಪದವಿ ಕಾಲೇಜಿನ ರೋವರ್ ರೇಂಜರ್ಸಿನ 20 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.
ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಗೀತಾ, ಶಿವಾನಂದ ಜಿ, ಹಾಗೂ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.