ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಜೂ.10ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಪೋಷಕರು ವಿದ್ಯಾರ್ಥಿಗಳಿಗೆ ಕುಂಕುಮ ಹಚ್ಚಿ ದೀಪ ಬೆಳಗಿ ಆರತಿ ಮಾಡಿ ಬರಮಾಡಿಕೊಂಡರು.ಮುಖ್ಯ ಅತಿಥಿಗಳಾಗಿದ್ದ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ವಾಮಿ ವಿವೇಕಾನಂದರ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆನೀಡಿದರು.

ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಸಂಚಾಲಕ ಕೆ. ಸುಧಾಕರ ಕಾಮತ್, ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ,ಗೌರವ ಸಲಹೆಗಾರ ನ. ಸೀತಾರಾಮ, ಆಡಳಿತಾಧಿಕಾರಿ ಗೋಪಾಲರಾವ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ, ವಿದ್ಯಾರ್ಥಿಗಳ ಪೋಷಕರು, ಶಾಲಾ ಸಹ ಶಿಕ್ಷಕವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ವಂದಿಸಿದರು. ಸಹಶಿಕ್ಷಕಿಯರಾದ ಶ್ರೀಮತಿ ದಿವ್ಯಾ ಹಾಗೂ ಶ್ರೀಮತಿ ಅರ್ಚನಾ ಕೆ.ವಿ. ಕಾರ್ಯಕ್ರಮ ನಿರೂಪಿಸಿದರು.