ಸುಳ್ಯ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಯೋಗೋತ್ಸವ” ಕಾರ್ಯಕ್ರಮ

0

ಸುಳ್ಯ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಜೂ.15 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಭಾರತ್ ಸ್ಕೌಟ್ಸ್-ಗೈಡ್ಸ್, ಕಬ್ಸ್-ಬುಲ್‌ಬುಲ್ ಸಂಸ್ಥೆಯ ಸಹಯೋಗದೊಂದಿಗೆ “ಯೋಗೋತ್ಸವ” ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ರೆ| ಫಾ| ವಿಕ್ಟರ್ ಡಿ’ಸೋಜರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಸುಳ್ಯ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶಶಿಧರ ಎಂ.ಜೆ., ಯೋಗ ತರಬೇತುದಾರ ಸಂತೋಷ್ ಮುಂಡಕಜೆ, ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಸಿ| ಮೇರಿ ಸ್ಟೆಲ್ಲಾ, ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೀಟಾಲತಾರವರು ಉಪಸ್ಥಿತರಿದ್ದರು. ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಆರಂಭಿಸಿ, ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ಶಶಿಧರ್‌ರವು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನಂತರ ಯೋಗ ಶಿಕ್ಷಕರಾದ ಸಂತೋಷ್ ಮುಂಡಕಜೆಯವರು ಯೋಗದ ಮಹತ್ವದ ಜೊತೆಗೆ ಯೋಗದ ಕೆಲವು ಆಸನಗಳನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನೀಡಿದರು.ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಸಿ| ಮೇರಿ ಸ್ಟೆಲ್ಲಾರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶಾಲಾ ಸಂಚಾಲಕರಾದ ವಂದನೀಯ ಫಾದರ್ ವಿಕ್ಟರ್ ಡಿ’ಸೋಜರವರು ಯೋಗದ ಕುರಿತಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಕಾರ್ಯಕ್ರಮಕ್ಕೆ ಶಿಕ್ಷಕ ಭಾನುಪ್ರಕಾಶ್ ಸ್ವಾಗತಿಸಿದರು. ಶಿಕ್ಷಕಿ ಗೀತಾ ಲಕ್ಷ್ಮಿ ಯವರು ವಂದಿಸಿ, ಶ್ರೀಮತಿ ಚೈತ್ರಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕಿಯರಾದ ಶ್ರೀಮತಿ ಅನಿತಾ ಮಸ್ಕರೇನ್ಹಸ್, ಶ್ರೀಮತಿ ಸವಿತಾ ಎಸ್., ಶ್ರೀಮತಿ ಪುಷ್ಪವೇಣಿ, ಶ್ರೀಮತಿ ಮಮತಾ, ಶ್ರೀಮತಿ ಮರಿಯ ಕ್ರಾಸ್ತರವರು ಸಹಕರಿಸಿದರು. ಸುಮಾರು ೧೪೮ ಮಂದಿ ಸ್ಕೌಟ್ಸ್-ಗೈಡ್ಸ್, ಕಬ್-ಬುಲ್ ಬುಲ್ ವಿದ್ಯಾರ್ಥಿಗಳು ಈ ಸುಂದರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.