ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿ ಆರ್. ಎಂ. ಎಸ್. ಎ. ಪ್ರೌಢಶಾಲೆಯಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೋಷಕರ ಸಭೆಯು ನಡೆಯಿತು.
ಪ್ರೌಢಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷ ಹೊನ್ನಪ್ಪ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಸಂಪಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ, ಗ್ರಾ.ಪಂ. ಉಪಾಧ್ಯಕ್ಷ ಎಸ್. ಕೆ. ಹನೀಫ್, ಮಾಜಿ ಅಧ್ಯಕ್ಷೆ ಯಮುನಾ ಬಿ. ಎಸ್. ಹಿರಿಯ ಪ್ರಾಥಮಿಕ ಶಾಲಾ ಎಸ್. ಡಿ. ಎಂ. ಸಿ ಉಪಾಧ್ಯಕ್ಷೆ ಗಾಯತ್ರಿ ಉಪಸ್ಥಿತರಿದ್ದರು.
ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ಅವರು ಸ್ವಾಗತಿಸಿ, ಪ್ರೌಢಶಾಲೆ ವಿಭಾಗದ ಮುಖ್ಯೋಪಾಧ್ಯಾಯನಿ ಜಯಶ್ರೀ ವಿದ್ಯಾರ್ಥಿಗಳು ಈ ಬಾರಿ 95%ಫಲಿತಾಂಶ ಹಾಗೂ ಡಿಸ್ಟಿಂಕ್ಷನ್ ಪಡೆಯುವ ಮೂಲಕ ಒಳ್ಳೆಯ ಸಾಧನೆ ಬಗ್ಗೆ ಫಲಿತಾಂಶದ ಸಂಪೂರ್ಣ ವಿವರ ಮಂಡಿಸಿದರು.
ಸನ್ಮಾನ ಪತ್ರವನ್ನು ಶಾಲಾ ಶಿಕ್ಷಕಿಯರಾದ ನಯನ, ಸವಿತ, ಇಂದಿರಾ ವಾಚಿಸಿದರು ದೈಹಿಕ ಶಿಕ್ಷಕಿ ಸುಜಯ ಕಾರ್ಯಕ್ರಮ ನಿರೂಪಿಸಿ ಕಮಲಾಕ್ಷ ವಂದಿಸಿದರು. ಕಾರ್ಯಕ್ರಮದಲ್ಲಿ 5 ಜನ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಹೊನ್ನಪ್ಪ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಕೊನೆಯಲ್ಲಿ ಪೋಷಕರ ಸಭೆ ಜರುಗಿತು.
ಪೋಷಕರು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.