ಜಾಲ್ಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ವತಿಯಿಂದ ವಾಟರ್ ಬೆಡ್ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ ತಾಲೂಕಿನ ಯೋಜನೆಯ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಧರ್ಮಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಜನಮಂಗಳ ಕಾರ್ಯಕ್ರಮದಡಿಯಲ್ಲಿ ಜಾಲ್ಸೂರು ಗ್ರಾಮದ ಮಹಾಬಲಡ್ಕ ನಿವಾಸಿ ಭಾಸ್ಕರ ಬೆಳ್ಚಪ್ಪಾಡ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದು ಅವರಿಗೆ ವಾಟರ್ ಬೆಡ್ ಜೂ.16ರಂದು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅಂಜನಾದ್ರಿ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಮಹಾಬಲಡ್ಕ, ಜಾಲ್ಸೂರು ವಲಯದ ಮೇಲ್ವಿಚಾರಕ ತೀರ್ಥರಾಮ ಒಕ್ಕೂಟ ಪದಾಧಿಕಾರಿಗಳು ಸದಸ್ಯರುಗಳು,ಭಾಸ್ಕರ ಬೆಳ್ಚಪ್ಪಾಡರ ಮನೆಯವರು ಉಪಸ್ಥಿತರಿದ್ದರು.