ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಗ್ರಾಮ ವಿಕಾಸ ಸಮಿತಿ ಜಾಲ್ಸೂರು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಂ ಕಾರ್ಯಕ್ರಮದಡಿ ಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇದರ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಜೂ.18ರಂದು ಜರುಗಿತು.

ಕಾರ್ಯಕ್ರಮವನ್ನು ಉದ್ಯಮಿ ಕೆ. ಸುಧಾಕರ ಕಾಮತ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಷನ್ ಜನರೇಶನ್ ವ್ಯವಸ್ಥಾಪಕ ರಾಮಚಂದ್ರ, ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಗೋಪಾಲ ಕಾನ ಅಡ್ಕಾರು, ಹರ್ಷಿತ್ ಪೇರಾಲು, ಗ್ರಾಮ ವಿಕಾಸ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.