ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪಂದ್ಯಾಟಗಳು ಮತ್ತು ಕ್ರೀಡಾಕೂಟದ ಪೂರ್ವಭಾವಿ ಸಭೆ

0

2024-25ನೇ ಶೈಕ್ಷಣಿಕ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಪಂದ್ಯಾಟಗಳು ಮತ್ತು ಕ್ರೀಡಾಕೂಟದ ಪೂರ್ವಭಾವಿ ಸಭೆ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ದಿನಾಂಕ ಜೂ.19(ಇಂದು)ರಂದು ನಡೆಯಿತು.


ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ. ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಚಳ್ಳ ಗ್ರಾಮ ಪಂಚಾಯತ್ ನ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ಅತಿಥಿಗಳಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಆಶಾ ನಾಯಕ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಧನಂಜಯ ಬಾಳೆತೋಟ, ಸುಳ್ಯ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕ ಸಂಘದ ಕಾರ್ಯದರ್ಶಿಗಳಾದ ಗೋಪಿನಾಥ್ ಎಂ, ಸುಳ್ಯ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಸುಳ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ ಕೆರೆಮೂಲೆ, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರು (ಗ್ರೇಡ್ 1) ಸಂಘದ ಅಧ್ಯಕ್ಷ ಸೂಫಿ ಪೆರಾಜೆ, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರು (ಗ್ರೇಡ್ 2) ಸಂಘದ ಅಧ್ಯಕ್ಷರಾದ ಧನಂಜಯ ಎಂ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಯೋಗೀಶ್ ಪಂಜ, ದೇವಚಳ್ಳ ಕ್ಲಸ್ಟರ್ ನ ಸಿ ಆರ್ ಪಿ ಗಳಾದ ಮಹೇಶ್ ಭಾಗವಹಿಸಿದರು. ಸಭಾ ಕಾರ್ಯಕ್ರಮದ ನಂತರ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಪಂದ್ಯಾಟಗಳನ್ನು ತಾಲೂಕಿನ ವಿವಿಧ ಶಾಲೆಗಳಿಗೆ ಹಂಚಲಾಯಿತು ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ವ್ಯವಸ್ಥಿತವಾಗಿ ಆಯೋಜಿಸುವುದೆಂದು ತೀರ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿ ಯು ಎಸ್ ಧನ್ಯವಾದ ಅರ್ಪಿಸಿದರು. ಶಿಕ್ಷಕರಾದ ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.