ಪಂಜ ಸ.ಮಾ.ಹಿ. ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ

0

ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ)ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿರುವುದಾಗಿ ತಿಳಿದುಬಂದಿದೆ.

ಶಾಲಾ ಅಭಿವೃದ್ದಿ ಸಮಿತಿ ಅಧ್ಯಕ್ಷರು ಹಾಗೂ ಅಧ್ಯಾಪಕ ವೃಂದದವರು ಸರ್ಕಾರಕ್ಕೆ ಈ ಕುರಿತು ಮನವಿಯನ್ನು ಸಲ್ಲಿಸಿದ್ದರು.
ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾಧ್ಯಮ(ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಪ್ರಾರಂಭಿಸಲಾಗುವುದು ಇದರಿಂದ ಹೆಚ್ಚು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಾತಿ ಮಾಡಬಹುದಾಗಿದ್ದು, ಸರ್ಕಾರ ಆರಂಭಿಕವಾಗಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಕ್ಕೆ ಅನುಮತಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯವರು ಸಂತಸ ವ್ಯಕ್ತಪಡಿಸಿದ್ದು ,ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಕೊಳ್ಳ‌ ಬಹುದು ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ಪೂರಕವಾಗಿ ಕಳೆದ ಐದು ವರ್ಷಗಳಿಂದ ಇಲ್ಲಿ ಎಲ್ ಕೆ ಜಿ, ಯು ಕೆ ಜಿ,ಪ್ರಿ ಕೆ ಜಿ ತರಗತಿಗಳು ಪೂರ್ವ ಪ್ರಾಥಮಿಕ ಶಾಲಾ ಸಮಿತಿ ವತಿಯಿಂದ ಪೋಷಕರ, ದಾನಿಗಳ ಸಹಕಾರದೊಂದಿಗೆ ನಡೆಯುತ್ತಿದೆ.