ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ, ದ.ಕ. ಜಿಲ್ಲೆ ಮತ್ತು ಕ್ರೀಡಾ ಭಾರತಿ ಸುಳ್ಯ ಘಟಕದ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ನಡೆಸಲಾಯಿತು.

ಮುಖ್ಯ ಅಭ್ಯಾಗತರಾಗಿ ಸುಳ್ಯದ ಕೆವಿಜಿ ಆಯುರ್ವೇದ ಕಾಲೇಜಿನ ಎಸೋಸಿಯೇಟ್ ಪ್ರೊಫೆಸರ್ ಶ್ರೀಮತಿ ಡಾ. ಸಹನಾ ಎಸ್. ಮಾತನಾಡಿ ಪ್ರತೀ ದಿನ ಯೋಗ ಮಾಡುವುದರಿಂದ ಜ್ಞಾನ ಶಕ್ತಿ ಹೆಚ್ಚುವುದರ ಜೊತೆಗೆ ನಮ್ಮ ಶಾರೀರಿಕ, ಮಾನಸಿಕ ಒತ್ತಡವನ್ನು ಸಮತೋಲನದಲ್ಲಿ ಇರಿಸಿ ಆಯುಷ್ಯವನ್ನು ಹೆಚ್ಚುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸುಳ್ಯದ  ಕ್ರೀಡಾ ಭಾರತಿ ಘಟಕದ  ಅಧ್ಯಕ್ಷ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎ.ಸಿ. ವಸಂತ ಅವರು ಯೋಗ ದಿನಾಚರಣೆಯ ಮಹತ್ವದ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ. ಸೀತಾರಾಮ, ಸಂಚಾಲಕ ಕೆ. ಸುಧಾಕರ್ ಕಾಮತ್, ಸದಸ್ಯರಾದ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಕ್ರೀಡಾ ಭಾರತಿ ಸುಳ್ಯ ಘಟಕದ ಗೌರವ ಸಲಹೆಗಾರರು ಹಾಗೂ ಪೆರಾಜೆ ಜ್ಯೋತಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಪುರುಷೋತ್ತಮ ಕಿರ್ಲಾಯ, ಉಪಾಧ್ಯಕ್ಷ ಶರತ್ ಅಡ್ಕಾರು, ಸದಸ್ಯರಾದ ಹರಿಪ್ರಕಾಶ್ ಅಡ್ಕಾರು, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ, ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್, ಸಹ ಶೀಕ್ಷಕ ವೃಂದದವರು ಉಪಸ್ಥಿತರಿದ್ದರು.


ಬಳಿಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.
ಸಹಶಿಕ್ಷಕಿ ಶ್ರೀಮತಿ ಪಾವನ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕಿ ಶ್ರೀಮತಿ ವಾಣಿ ಕಾರ್ಯಕ್ರಮ ಸಂಯೋಜಿಸಿದರು.