ಪೆರಾಜೆ ಬಿಜೆಪಿ ಶಕ್ತಿ ಕೇಂದ್ರ ಯುವ ಮೋರ್ಚಾದ ಅಧ್ಯಕ್ಷರಾಗಿ ಪ್ರದೀಪ್ ಕುಂಬಳಚೇರಿ

0

ಶಕ್ತಿ ಕೇಂದ್ರ ಪೆರಾಜೆ ಇದರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪ್ರದೀಪ್ ಕುಂಬಳಚೇರಿ ಆಯ್ಕೆಯಾಗಿದ್ದಾರೆ.
ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಸುಮನ್ ಪೀಚೆಮನೆ , ಕಾರ್ಯದರ್ಶಿಗಳಾಗಿ ನೋಹಿತ್ ನಿಡ್ಯಮಲೆ ಆಯ್ಕೆಯಾದರು.
ಪೆರಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆದ ಭಾರತೀಯ ಶಕ್ತಿ ಕೇಂದ್ರ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಈ ಸಂದರ್ಭ ಶಕ್ತಿ ಕೇಂದ್ರದ ಅಧ್ಯಕ್ಷ ಸುಭಾಷ್ ಚಂದ್ರ ಬಂಗಾರಕೋಡಿ , ಕಾರ್ಯದರ್ಶಿ ಉದಯ ಚಂದ್ರ ಕುಂಬಳಚೇರಿ, ಮಡಿಕೇರಿ ತಾಲೂಕು ಗ್ರಾಮಾಂತರ ಭಾ.ಜ.ಪ ಮಂಡಲ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಪಂಚಾಯತ್ ಅಧ್ಯಕ್ಷೇ ಚಂದ್ರಕಲಾ ಬಳ್ಳಡ್ಕ, ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಸೇರಿದಂತೆ ಪಂಚಾಯತ್ ಸದಸ್ಯರುಗಳು ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು , ಸೇರಿದಂತೆ ವಿವಿಧ ಮೋರ್ಚಗಳ ಪದಾಧಿಕಾರಿಗಳು , ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಉಪಸ್ಥಿತರಿದ್ದರು.