ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಜೂನ್ 21ರಂದು ನಡೆಯಿತು.
ವಿದ್ಯಾ ಸಂಸ್ಥೆಯ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜಾ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ದಿನನಿತ್ಯ ಯೋಗ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರೀಯ ಯೋಗ ಪಟು ಸಂತೋಷ್ ಮುಂಡಕಜೆ ಇವರು ವಿವಿಧ ಆಸನಗಳನ್ನು ಹಾಗೂ ಏರೋಬಿಕ್ಸ್ ವ್ಯಾಯಾಮಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.ವೇದಿಕೆಯಲ್ಲಿ ವಿದ್ಯಾ ಸಂಸ್ಥೆಯ ನಿಯೋಜಿತ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸ್ಟೆಲ್ಲಾ ಮೇರಿ, ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೀಟಲತಾ ಡಿ’ಸಿಲ್ವಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವಮಿಕ ಎಂಟನೇ ಸ್ವಾಗತಿಸಿ, ಲೌಕ್ಯ ಏಳನೇ ತರಗತಿ ವಂದಿಸಿ , ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪವೇಣಿ ಹುದೇರಿ ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.