ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಈ ಶಾಲೆಯ ಮುಖ್ಯ ಗುರುಗಳು ,ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ಇವರ ವಹಿಸಿದ್ದರು . ಈ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿ ಇವರು ಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಶಾಲಾ ಸಹ ಶಿಕ್ಷಕಿ ಶ್ರೀಮತಿ ರೇಷ್ಮಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು ಸಹ ಶಿಕ್ಷಕಿ ಶ್ರೀಮತಿ ಭಾನುಮತಿ ಇವರು ವಂದಿಸಿದರು.
ನಂತರ ದೈಹಿಕ ಶಿಕ್ಷಣ ಶಿಕ್ಷಕಿಯ ಮಾರ್ಗದರ್ಶನದಲ್ಲಿ ಎಲ್ಲ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಯೋಗಭ್ಯಾಸದಲ್ಲಿ ತೊಡಗಿದರು.