ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

0


ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರರವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಶುಭ ಹಾರೈಸಿದರು.

ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಉಜ್ವಲ್ ಯು ಜೆ ರವರು ಯೋಗ ದಿನಾಚರಣೆಗೆ ಚಾಲನೆನೀಡಿದರು ಹಾಗೂ ಯೋಗದ ಮಹತ್ವವನ್ನು ಹಾಗೂ ವಿಶ್ವದಾದ್ಯಂತ ಯೋಗ ಪಸರಿಸಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀಮತಿ ಮಮತ ಎಂ ಜೆ ಅವರು ಆಗಮಿಸಿದ್ದರು. ಅವರು ವಿದ್ಯಾರ್ಥಿಗಳಿಗೆ ಯೋಗಭ್ಯಾಸದ ಮಹತ್ವವನ್ನು ಸವಿವರವಾಗಿ ವಿವರಿಸಿ,ಸುಮಾರು ಒಂದು ಗಂಟೆಯ ಕಾಲ ವಿವಿದ ಆಸನಗಳನ್ನು ಮಾಡಿಸಿದರು.ವಿದ್ಯಾರ್ಥಿನಿಯಾದ ವೈಷ್ಣವಿ ಇವರು ಸಹಕರಿಸಿದರು.


ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು