ಸುಳ್ಯ ಎಂ.ಜಿ.ಎಂ. ನಲ್ಲಿ ಯೋಗ ದಿನಾಚರಣೆ

0

ಸುಳ್ಯದ ಕೊಡಿಯಾಲಬೈಲು ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ , ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಅನುಷಾ, ಸ್ನೇಹಾ ಹಾಗೂ ವೈಷಾಕ್ ರವರು ಆಗಮಿಸಿ ಯೋಗದ ಮಹತ್ವವನ್ನು ತಿಳಿಸಿ, ವಿವಿಧ ರೀತಿಯ ಯೋಗಾಸನಗಳ ಪ್ರಾತ್ಯಕ್ಷಿಕೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮೀ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಭವ್ಯ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಚಿತ್ರಲೇಖರವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕ -ಶಿಕ್ಷಕೇತರ ವೃಂದದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.