ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದಿನವಾದ ಜೂನ್ 21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ದಿವ್ಯ ಕುಮಾರಿ ಕೆ. ಯೋಗದ ಬಗ್ಗೆ ಪ್ರಸ್ತಾಪಿಸಿದರು. ರಾಷ್ಟ್ರಮಟ್ಟದ ಯೋಗ ಪಟು ನಮ್ಮ ಶಾಲಾ 8ನೇ ತರಗತಿ ವಿದ್ಯಾರ್ಥಿಯಾದ ತನುಷ್ ಎಂ ಎಚ್ ರವರು ಯೋಗದ ಮಾಹಿತಿ ಮತ್ತು ಪ್ರಾತಕ್ಷಿಕೆ ಯನ್ನು ನೀಡಿದರು ಹಾಗೂ ವಿದ್ಯಾರ್ಥಿಗಳು ಇದನ್ನು ಅನುಸರಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಗದಾಧರ ಬಾಳುಗೋಡು ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ರಮೇಶ್ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದು ಯೋಗಾಸನದಲ್ಲಿ ಪಾಲ್ಗೊಂಡರು.