2023-24 ನೇ ಶೈಕ್ಷಣಿಕ ಸಾಲಿನ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಬರುವ 798 ವಸತಿ ಶಾಲೆಗಳಲ್ಲಿ ,ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಮೆನ್ನಬೆಟ್ಟು ಕಿನ್ನಿಗೋಳಿ ,ಮಂಗಳೂರು ಇಲ್ಲಿನ ಕನ್ನಡ ಭಾಷಾ ಶಿಕ್ಷಕರಾದ ಮಹೇಶ್ ಕೆ .ಪಿ ಅವರು ತಮ್ಮ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಸರಾಸರಿ 97.30% ಶೇಕಡವಾರು ಫಲಿತಾಂಶವನ್ನು ಪಡೆದುಕೊಂಡು ರಾಜ್ಯಮಟ್ಟದಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಪದಕ ನೀಡಿ ಗೌರವಿಸಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಂಟ್ರಮಜಲು ಪದ್ಮನಾಭ ಗೌಡ ಹಾಗೂ ಯಶೋಧ ದಂಪತಿಗಳ ಪುತ್ರ. ಪ್ರಸ್ತುತ ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ,ಕಿನ್ನಿಗೋಳಿ ಮಂಗಳೂರು ಇಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.