ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಯೋಗವನ್ನು ಪ್ರತೀದಿನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದು ಹೇಳಿದರು.

ಯೋಗಾಸನ ಪ್ರದರ್ಶನ ವಿದ್ಯಾರ್ಥಿಗಳಿಂದ ನೆರವೇರಿತು. ಇದನ್ನು ಗಣಿತ ಶಿಕ್ಷಕರಾದ ಉದಯಕುಮಾರ ರೈ ಎಸ್ ನಿರ್ವಹಿಸಿದರು. ಮುಖ್ಯಶಿಕ್ಷಕರಾದ ಯಶೋಧರ ಎನ್ ಸ್ವಾಗತಿಸುದರೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಹರಿಪ್ರಸಾದ್ ರೈ ಜಿ ವಂದಿಸಿದರು. ಅರವಿಂದ ಕಾಯಾರ ಕಾರ್ಯಕ್ರಮ ನಿರೂಪಿಸಿದರು.