ದರ್ಖಾಸ್ತು ಸ. ಹಿ. ಪ್ರಾ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ದರ್ಖಾಸ್ತು ಸ. ಹಿ. ಪ್ರಾ ಶಾಲೆಯಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ತರಬೇತುದಾರರಾದ ಸುಪ್ರಿಯಾ ಆಳ್ವ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಾಣಾಯಾಮದ ಮಹತ್ವವನ್ನು ತಿಳಿ ಹೇಳುವುದರೊಂದಿಗೆ, ಯೋಗಾಸನಗಳು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಉತ್ತಮ ಔಷಧ ವಾಗಿದೆ ಆದ್ದರಿಂದ ದಿನ ನಿತ್ಯದ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವಂತೆ ಹೇಳಿದರು.

ನಂತರ ಸರಳ ಯೋಗಾಸನ ಮತ್ತು ಪ್ರಾಣಾಯಾಮಾ ಗಳನ್ನು ಮಾಡಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅವರನ್ನು ಅನುಸರಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಶಾಲಾ ಮುಖ್ಯ ಶಿಕ್ಷಕಿ ಪ್ರೇಮಾ ಆರ್. ಸ್ವಾಗತಿಸಿ, ವಂದಿಸಿದರು.