ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಗುತ್ತಿಗಾರು ಇಲ್ಲಿ ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ನಡೆಯಿತು.
ಯೋಗ ಅಧ್ಯಾಪಕ ಶರತ್ ಮರ್ಗಿಲಡ್ಕ ಅವರ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಆಸನಗಳನ್ನು, ಮತ್ತು ಯೋಗದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಟ್ರೀಸಾ ಜಾನ್, ಶಾಲಾ ಸಂಚಾಲಕಿ ಸಿಸ್ಟರ್ ಪಾವಾನ, ಶಿಕ್ಷಕವರ್ಗ ಉಪಸ್ಥಿತರಿದ್ದರು.