ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪೂರ್ವ ವಿಭಾಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ 175 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜನಾರ್ಧನ ಕೆ. ಎನ್ ರವರು ವಿದ್ಯಾರ್ಥಿಗಳು ಮನಸ್ಸಿನ ಏಕಾಗ್ರತೆಗೆ ಯೋಗ , ಮತ್ತು ಪ್ರಾಣಾಯಾಮಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಂದೇಶ ನೀಡಿದರು. ವಿದ್ಯಾರ್ಥಿನಿಯರಾದ ಭವಿತಾ, ಜನನಿ ಮತ್ತು ಅನುಜ್ಞಾರವರು ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿ ಅವುಗಳ ಮಹತ್ವವನ್ನು ವಿವರಿಸಿದರು. ಉಪನ್ಯಾಸಕಿ ಶ್ರೀಮತಿ ಪರಿಮಳಾ ರಾವ್ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.