ನೀಡ್ ಬೇಸ್ಡ್ ಇಂಡಿಯಾ ಬೆಂಗಳೂರು ಇದರ ಯೋಜನೆಯಡಿಯಲ್ಲಿ ಸುಳ್ಯ ತಾಲೂಕಿನ 28 ಗ್ರಾಮೀಣ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ 2024-2025 ನೇ ಶೈಕ್ಷಣಿಕ ವರ್ಷಕ್ಕೆ ಅಗತ್ಯವಾದ ಸುಮಾರು 8 ಲಕ್ಷ ಮೌಲ್ಯದ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್
ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಸುಂದರಭಾರತ ಬೆಂಗಳೂರು ಇದರ ಟ್ರಸ್ಟಿಗಳಾದ ಪ್ರತಾಪ್ ಕೆ, ಪರಾಶರ ಭಾರತೀಯ ಆಡಳಿತ ಫೆಲೋ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಸನ್ನ ,ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು.ಕೆ,ದೈಹಿಕ ಪರಿವೀಕ್ಷಣಾಧಿಕಾರಿ ಆಶಾ,ಯುವಜನ ಸಂಯುಕ್ತ ಮಂಡಳಿ ಮಾಜಿ ಅಧ್ಯಕ್ಷ ತೇಜಸ್ವಿ ಕಡಪಳ,ಸುಳ್ಯ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು.
ಶಿಕ್ಷಕಿ ಸವಿತಾ ಪ್ರಾರ್ಥಿಸಿದರು.ಶೀತಲ್ ಯು.ಕೆ ಸ್ವಾಗತಿಸಿ, ದಕ್ಷಿಣ ಕನ್ನಡ ನೋಟ್ ಪುಸ್ತಕ ವಿತರಣಾ ಸಂಯೋಜಕಿ ಕೋಲ್ಚಾರು ಶಾಲೆಯ ಸಹ ಶಿಕ್ಷಕಿ ಜಲಜಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮರ್ಕಂಜ ಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು. ಎಣ್ಮೂರು ಪ್ರೌಢ ಶಾಲಾ ಶಿಕ್ಷಕ ಲಿಂಗಪ್ಪ ಬೆಳ್ಳಾರೆ ನಿರೂಪಿಸಿದರು.