ರಾಮಚಂದ್ರ ಭಟ್ ರವರು ಎಲ್ಲರೊಂದಿಗೆ ಆತ್ಮೀಯತೆ ಬೆಳೆಸಿಕೊಂಡವರು : ಎಸ್.ಅಂಗಾರ
ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ
ಪ್ರೌಢಶಾಲಾ ವಿಭಾಗದ ಗಣಿತ ಶಿಕ್ಷಕ ,ಎನ್.ಸಿ.ಸಿ.ಅಧಿಕಾರಿ ರಾಮಚಂದ್ರ ಭಟ್ ರವರು ಜೂ.30 ರಂದು ಸೇವೆಯಿಂದ ನಿವೃತ್ತಿಗೊಳ್ಳಲಿದ್ದು ಜೂ.23 ರಂದು ಕೆಪಿಎಸ್ ನಲ್ಲಿ ಭೋಜನ ಕೂಟ ನಡೆಯಿತು.
ಭೋಜನ ಕೂಟದ ಮೊದಲು ಸಭಾ ಕಾರ್ಯಕ್ರಮ ನಡೆಯಿತು.
ಶಿಕ್ಷಕ ರಾಮಚಂದ್ರ ಭಟ್ ರವರು ಸ್ವಾಗತಿಸಿ, ತಾನು ಸೇವೆ ಸಲ್ಲಿಸಿದ ದಿನಗಳನ್ನು ಸ್ಮರಿಸಿಕೊಂಡು ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಶಾಸಕಿ ಭಾಗೀರಥಿ ಮುರುಳ್ಯರವರು ಮಾತನಾಡಿ ಕೆಪಿಎಸ್ ನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮವಾದ ಶಿಕ್ಷಣ ನೀಡಲಾಗುತ್ತಿದೆ.ಹಲವು ವರ್ಷಗಳಿಂದ ಉತ್ತಮವಾಗಿ ಸೇವೆ ಸಲ್ಲಿಸಿ ನಿವೃತ್ತಿಹೊಂದಲಿರುವ ರಾಮಚಂದ್ರ ಭಟ್ ರವರ ನಿವೃತ್ತಿಜೀವನವು ಆಯುರಾರೋಗ್ಯದಿಂದ ಕೂಡಿರಲಿ ಎಂದು ಶುಭಹಾರೈಸಿದರು.
ಮಾಜಿ ಸಚಿವ ಎಸ್.ಅಂಗಾರರವರು ಮಾತನಾಡಿ ಶಿಕ್ಷಕ ರಾಮಚಂದ್ರರವರು ಎಲ್ಲರೊಂದಿಗೆ ಆತ್ಮೀಯತೆಯನ್ನು ಬೆಳೆಸಿಕೊಂಡವರು.ಕಳೆದ 36 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿ ನಿವೃತ್ತರಾಗಲಿರುವ ನಿಮ್ಮ ಮುಂದಿನ ಜೀವನ ಸುಖ,ಸಂತೋಷದಿಂದ ಕೂಡಿರಲಿ ಎಂದು ಹೇಳಿದರು.
ಆಗಮಿಸಿದ ಗಣ್ಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ರಾಮಚಂದ್ರ ಭಟ್ ರವರನ್ನು ಶಾಲು ಹೊದಿಸಿ,ಹೂಗುಚ್ಛ ನೀಡಿ ನಿವೃತ್ತಿ ಜೀವನಕ್ಕೆ ಶುಭಕೋರಿದರು.
ವೇದಿಕೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾವಿನಯಚಂದ್ರ ,
ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್ ಕೊಡೆಂಕಿರಿ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ, ಕೆಪಿಎಸ್ ನ ಎಸ್.ಡಿ.ಎಂ.ಸಿ.ಕಾರ್ಯಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ರಾಜೀವಿ ಆರ್ ರೈ,ಕಾಲೇಜಿನ ಪ್ರಾಂಶುಪಾಲ ಜನಾರ್ದನ ಕೆ.ಎನ್, ಉಪಪ್ರಾಂಶುಪಾಲೆ ಉಮಾ ಕುಮಾರಿ, ಪ್ರಾಥಮಿಕ ವಿಭಾಗದ ಮುಖ್ಯಗುರು ಮಾಯಿಲಪ್ಪ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ ಉಪಸ್ಥಿತರಿದ್ದರು.