ವಿಧಾನ ಪರಿಷತ್ ಸದಸ್ಯರಾಗಿ ಪ್ರಥಮ ಬಾರಿಗೆ ಆಯ್ಕೆಯಾದ ಡಾ.ಧನಂಜಯ ಸರ್ಜಿಯವರು ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ,ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ ಹಾಗು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್ ಅವರ ಸಮ್ಮುಖದಲ್ಲಿ ಡಾ. ಧನಂಜಯ ಸರ್ಜಿ ಅವರು ಪ್ರಮಾಣ ವಚನ ಸ್ವೀಕರಿಸಿದರು.