ನಾಳೆ (ಜೂ.25) ಈ‌ ಭಾಗದಲ್ಲಿ ಕರೆಂಟಿಲ್ಲ

0

ಜೂ. 25 ರಂದು ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಲೊ, ತೋಡಿಕಾನ, ಕೊಲ್ವಾರ್, ದೇವರಗುಂಡ, ಅಚ್ಚಾವಾರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಮತ್ತು 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಾದ ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.