ಸುಳ್ಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

0

ಸುಳ್ಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವು ಜೂ.24 ರಂದು ಸಂತ ಬ್ರಿಜಿಡ್ಸ್ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳು ಬ್ಯಾಂಡ್ ಸೆಟ್ ಮೂಲಕ ನೂತನ ಮಂತ್ರಿಗಳನ್ನು ವೇದಿಕೆಗೆ ಆಹ್ವಾನಿಸಿಸರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ರೆ.ಫಾದರ್ ವಿಕ್ಟರ್ ಡಿಸೋಜ, ಪ್ರಾಥಮಿಕ ಶಾಲಾ ಪಿಟಿಎ ಉಪಾಧ್ಯಕ್ಷರಾದ ಶಶಿಧರ ಎಂ ಜೆ, ಮುಖ್ಯ ಅತಿಥಿಯಾಗಿ ಶ್ರೀಮತಿ ಸುನಿತಾ ಮೊಂತೆರೊ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವು 6ನೇ ತರಗತಿ ವಿದ್ಯಾರ್ಥಿನಿಯರ ಪ್ರಾರ್ಥನೆಯಿಂದ ಆರಂಭಗೊಂಡಿತು. ಸಿಸ್ಟರ್ ಮೇರಿ ಸ್ಟೆಲ್ಲಾರವರು ಆಯ್ಕೆಯಾದ ನೂತನ ಶಾಲಾ ನಾಯಕ ಹಾಗೂ ಹಾಗೂ ಇತರ ಎಲ್ಲಾ ವಿದ್ಯಾರ್ಥಿ ಮಂತ್ರಿಗಳಿಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು. ಎಲ್ಲಾ ಮಂತ್ರಿಗಳಿಗೆ ಸಂಬಂಧಿಸಿದ ಕರ್ತವ್ಯಗಳನ್ನು ತಿಳಿಸಿ ಕೊಟ್ಟರು. ಶಾಲಾ ಸಂಚಾಲಕರು, ಮುಖ್ಯ ಅತಿಥಿ ಹಾಗೂ ಪಿಟಿಎ ಉಪಾಧ್ಯಕ್ಷರು ನೂತನ ಮಂತ್ರಿಗಳನ್ನು ಅಭಿನಂದಿಸಿದರು. ನ್ಯಾಯವಾದಿ ಶ್ರೀಮತಿ ಸುನಿತಾ ಮೊಂತೆರೊ ಎಲ್ಲ ಮಂತ್ರಿಗಳ ಕರ್ತವ್ಯಗಳನ್ನು ಉತ್ತಮವಾಗಿ ನಿರ್ವಹಿಸುವಂತೆ ಮಾರ್ಗದರ್ಶನವನ್ನು ನೀಡಿದರು. ಪ್ರಾಥಮಿಕ ಶಾಲಾ ಪಿಟಿಎ ಉಪಾಧ್ಯಕ್ಷರು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ನಾಯಕ ಲಕ್ಷ್ಯ ಜಿ ರೈ ಹಾಗೂ ಉಪನಾಯಕಿ ಸಾನ್ವಿ ಎ ಜೆ ತಮ್ಮ ಮನದಾಳದ ಮಾತುಗಳನ್ನು ಆಡಿದರು. ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.
6ನೇ ತರಗತಿ ವಿದ್ಯಾರ್ಥಿ ಧನುಷ್ ಸ್ವಾಗತಿಸಿ, 6 ನೇ ತರಗತಿಯ ವಿದ್ಯಾರ್ಥಿನಿ ಶಾನ್ವಿ ವಿ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಪುಷ್ಪವೇಣಿ, ಶ್ರೀಮತಿ ಪುಷ್ಪಲತಾ, ಶ್ರೀಮತಿ ಜ್ಯೋತಿ, ಶ್ರೀಮತಿ ಲತಾ ಹಾಗೂ ಎಲ್ಲಾ ಶಿಕ್ಷಕ ಶಿಕ್ಷಕೇತರರು ಸಹಕರಿಸಿದರು.