ಬಿ.ಸಿ.ಎಂ.: ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

0

ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ- I, IIಎ, IIಬಿ, IIIಎ, IIIಬಿ, ಪ.ಜಾತಿ /ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ೨೦೨೪-೨೫ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಜು.೨೦ ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಪ್ರವರ್ಗ ? I , ಎಸ್.ಸಿ ಮತ್ತು ಎಸ್.ಟಿ. ರೂ : ೨.೫೦ ಲಕ್ಷ ಹಾಗೂ ಪ್ರವರ್ಗ IIಎ, IIಬಿ, IIIಎ, IIIಬಿ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ರೂ : ೧.೦೦ ಲಕ್ಷ ಆದಾಯ ಮಿತಿಯಾಗಿದೆ.

ಅರ್ಜಿಯನ್ನು : https://shp.karnataka.gov.in/bcwd ನಲ್ಲಿ ಸಲ್ಲಿಸಬೇಕು .
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ನ್ನು ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿ ದೇವರಾಜ ಅರಸು ಭವನ ಕೊಡಿಯಾಲ್‌ಬೈಲ್ ಸುಳ್ಯ ಇವರನ್ನು ಸಂಪರ್ಕಿಸಬಹುದು, ದೂರವಾಣಿ ಸಂಖ್ಯೆ : ೦೮೨೫೭-೨೩೦೬೫೯.

ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ- I, IIಎ, IIಬಿ, IIIಎ, IIIಬಿ, ಪ.ಜಾತಿ /ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ೨೦೨೪-೨೫ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಜು.೧೦ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಪ್ರವರ್ಗ ? I , ಎಸ್.ಸಿ ಮತ್ತು ಎಸ್.ಟಿ ರೂ : ೧.೦೦ ಲಕ್ಷ ಹಾಗೂ ಪ್ರವರ್ಗ IIಎ, IIಬಿ, IIIಎ, IIIಬಿ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ರೂ : ೪೪,೫೦೦.೦೦ ಆದಾಯ ಮಿತಿಯಾಗಿದೆ.