ಸುಂದರ ಕಾನಾವು ಪೊಲೀಸ್ ಉಪನಿರೀಕ್ಷಕರಾಗಿ ಭಡ್ತಿ

0

ಸಂಪ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಸುಂದರ ಕಾನಾವು ರವರು ಪೊಲೀಸ್ ಉಪನಿರೀಕ್ಷಕರಾಗಿ ಭಡ್ತಿಗೊಂಡು ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.


ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ಇವರು ಪೆರುವಾಜೆ ಗ್ರಾಮದ ಕಾನಾವು ದಿ.ಕೇಪು ಮತ್ತು ಅಂಗಾರೆ ದಂಪತಿ ಪುತ್ರ. ಇವರ ಪತ್ನಿ ಶ್ರೀಮತಿ ಲತಾ ಗೃಹಿಣಿಯಾಗಿದ್ದಾರೆ. ಪುತ್ರ ಮಯುಕ್ತ್ ಒಂದೂವರೆ ವರುಷದ ಮಗು.