ಧರ್ಮಸ್ಥಳಗ್ರಾಮಾಭಿವೃದ್ಧಿಯೋಜನೆಯವತಿಯಿಂದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿಮಾದಕವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗಾಂಧಿನಗರ ಕಾರ್ಯಕ್ಷೇತ್ರದ ಸದಸ್ಯರಿಗೆ ಜಾಗೃತಿಕಾರ್ಯಾಗಾರವನ್ನು ಜೂ.30 ರಂದು ಸುಳ್ಯ ಯೋಜನಾ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.
ಸುಳ್ಯ ವಲಯ ಅಧ್ಯಕ್ಷ ಮನೋಹರ ರವರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ
ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಭವಾನಿ ಶಂಕರ ಅಡ್ತಲೆ ಯವರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಮಕ್ಕಳ ಬಗ್ಗೆ ಪೋಷಕರು ಕಾಳಜಿ ವಹಿಸಬೇಕು ಎಂದು ಅವರು ಕರೆ ನೀಡಿದರು.
ಜನ ಜಾಗೃತಿ ವೇದಿಕೆಯ ಸುಳ್ಯ ವಲಯದ ಅಧ್ಯಕ್ಷ ಎಂ.ವೆಂಕಪ್ಪ ಗೌಡ,
ಸುಳ್ಯ ವಲಯದ ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ, ಸೇವಾಪ್ರತಿನಿಧಿ ಶ್ರೀಮತಿ ಸೌಜನ್ಯ, ಒಕ್ಕೂಟದ ಪದಾಧಿಕಾರಿಗಳಾದ ದೀಪಿಕಾ, ನಾರಾಯಣ ಜಿ.ಎನ್, ನಾಗಪಟ್ಟಣ ಒಕ್ಕೂಟದ ಅಧ್ಯಕ್ಷೆ ವಿಜಯಕುಮಾರಿ, ಮೋಹನ್ ರೈ,
ರಶ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಸದಸ್ಯ
ಚೋಮ ಸ್ವಾಗತಿಸಿ, ಜನಜಾಗೃತಿ ವೇದಿಕೆ ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ ವಂದಿಸಿದರು.
ಗಾಂಧಿನಗರ ಒಕ್ಕೂಟದ ಮತ್ತು ನಾಗಪಟ್ಟಣ ಒಕ್ಕೂಟದ ಪ್ರಬಂಧಕರು, ಸಂಯೋಜಕರು,ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು.