ಕುಮಾರಸ್ವಾಮಿ ವಿದ್ಯಾಲಯದಲ್ಲಿ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ ಕಾರ್ಯಗಾರ

0

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ವಿದ್ಯಾಗಮ ಟ್ರಸ್ಟ್ ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ ಎಂಬ ಗುಣಮಟ್ಟ ಅಭಿವೃದ್ಧಿಪಡಿಸುವ ಕುರಿತು ಕಾರ್ಯಗಾರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಮಾರಸ್ವಾಮಿ ವಿದ್ಯಾಲಯದ ಅಧ್ಯಕ್ಷರಾದ ಗಣೇಶ್ ಪ್ರಸಾದ್ ನೆರವೇರಿಸಿದರು. ವೇದಿಕೆಯಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ಸುಳ್ಳ ತಾಲೂಕಿನ ವಿವಿಧ ಪ್ರಾಥಮಿಕ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು. ಶಿಕ್ಷಕ ಸುಬ್ರಹ್ಮಣ್ಯ ಸ್ವಾಗತಿಸಿ ವಂದಿಸಿದರು.