ಗರ್ಭಗುಡಿಯ ನಿರ್ಮಾಣ ಕಾರ್ಯದ ಅಂತಿಮ ಹಂತದಲ್ಲಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಜು. 3ರಂದು ಭೇಟಿ ಮಾಡಿದರು.
ರಾಜರಾಜೇಶ್ವರಿ ದೇವಸ್ಥಾನ ನಿರ್ಮಾಣ ಯಾವ ಹಂತದಲ್ಲಿದೆ ಮತ್ತು ಶ್ರೀ ರಾಜರಾಜೇಶ್ವರಿ ಕ್ಷೇತ್ರದ ವಿಚಾರಗಳನ್ನು ಡಾ. ಹೆಗ್ಗಡೆಯವರಿಗೆ ತಿಳಿಸಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು, ಇತಿಹಾಸ ತಜ್ಞರಾದ ಉಮಾನಾಥ ಶೆಣೈ, ಆಡಳಿತ ಸಮಿತಿ ಕೋಶಾಧಿಕಾರಿ ಆನಂದ ಗೌಡ ಪಡ್ಪು, ಪದಾಧಿಕಾರಿಗಳಾದ ಪುರಂದರ ಗೌಡ ಸಪ್ತಗಿರಿ, ಜಗನ್ನಾಥ ರೈ ತಂಬಿನಮಕ್ಕಿ, ಚಂದ್ರಶೇಖರ ಪನ್ನೆ ಉಪಸ್ಥಿತರಿದ್ದರು.