ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಜು.03 ರಂದು ವನಮಹೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ರೆ. ಫಾದರ್ ವಿಕ್ಟರ್ ಡಿ’ಸೋಜಾ ಇವರು ವಹಿಸಿದ್ದರು.
ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸಿ l ಮೇರಿ ಸ್ಟೆಲ್ಲಾ, ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ರೀಟಾಲತಾ ಡಿ’ಸಿಲ್ವ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ನಾಯಕ ಹಿಮಾನ್ಶು ಹಾಗೂ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿ ನಾಯಕ ಲಕ್ಷ್ಯಜಿತ್ ಜಿ ರೈ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. 9ನೇ ತರಗತಿಯ ವಿದ್ಯಾರ್ಥಿ ಸುಶಾಂತ್ ನಾಯಕ್ ಸ್ವಾಗತಿಸಿ, ವನಮಹೋತ್ಸವದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದನು. ಶಿಕ್ಷಕರ ಮಾರ್ಗದರ್ಶನ ದೊಂದಿಗೆ ವಿದ್ಯಾರ್ಥಿಗಳು ಘೋಷಣೆ ಮತ್ತು ಪ್ರತಿಜ್ಞಾವಿಧಿ ಗೈದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಗಣ್ಯರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿದ್ಯಾರ್ಥಿಗಳಿಂದ ಪರಿಸರ ಗೀತೆ, ಪರಿಸರ ನೃತ್ಯ ಜರುಗಿತು. ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಮೇರಿ ಸ್ಟೆಲ್ಲ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಶಾಲಾ ಸಂಚಾಲಕರಾದ ರೆ. ಫಾದರ್ ವಿಕ್ಟರ್ ಡಿ’ಸೋಜಾ ಇವರು ವನಮಹೋತ್ಸವದ ಪ್ರಾಮುಖ್ಯತೆಯನ್ನು ತಿಳಿಸುತ್ತಾ ವಿದ್ಯಾರ್ಥಿಗಳಿಗೆ ಗಿಡಗಳನ್ನು ನೆಡುವುದರ ಮಹತ್ವವನ್ನು ತಿಳಿಸಿದರು.
9ನೇ ತರಗತಿಯ ವಿದ್ಯಾರ್ಥಿನಿ ಸಾರಿಕಾ ಕೆ. ಎಸ್. ವಂದಿಸಿ, ಕಾರ್ಯಕ್ರಮದ ನಿರೂಪಿಸಿದರು.
ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕಿಯರಾದ ಶ್ರೀಮತಿ ಹೇಮಾವತಿ ಬಿ ಹಾಗೂ ಕುಮಾರಿ ಸ್ಮಿತಾ ಡಿ’ಸೋಜಾ ಇವರು ವಹಿಸಿದ್ದರು. ಶಾಲೆಯ ಎಲ್ಲಾ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಯವರ ಸಹಕಾರದೊಂದಿಗೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ನೆರವೇರಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.