ನಿವೃತ್ತ ಮುಖ್ಯ ಶಿಕ್ಷಕ ಇಂದ್ರನಾಥ್ ಕರ್ಲಪ್ಪಾಡಿ ನಿಧನ

0

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಇಂದ್ರನಾಥ ಕರ್ಲಪ್ಪಾಡಿಯವರು ಅಲ್ಪಕಾಲದ ಅಸೌಖ್ಯದಿಂದ ಅವರ ಮನೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನಿಧನರಾದರು. ಅವರಿಗೆ ಸುಮಾರು 65 ವರ್ಷ ವಯಸ್ಸಾಗಿತ್ತು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿ ಸುಧೀರ್ಘ ವರ್ಷ ಅವರು ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕೆಲ ತಿಂಗಳಿಂದ ಅವರು ಅಸೌಖ್ಯಕ್ಕೊಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಮೃತರು ಪತ್ನಿ, ಮಕ್ಕಳು ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ.