ಪಂಚಾಯತ್ ರಾಜ್ ಒಕ್ಕೂಟದಿಂದ ಸಂಪಾಜೆ ಗ್ರಾಮ ಪಂಚಾಯತ್ ಭೇಟಿ

0

ಗ್ರಾಮ ಸ್ವರಾಜ್ ಪ್ರತಿಷ್ಠಾನ ದ. ಕ ಪಂಚಾಯತ್ ರಾಜ್ ಒಕ್ಕೂಟದಿಂದ ಸಂಪಾಜೆ ಗ್ರಾಮ ಪಂಚಾಯತ್ ಭೇಟಿ ನೀಡಲಾಯಿತು.

ಆರ್.ಜಿ.ಪಿ.ಆರ್.ಎಸ್.ಅಧ್ಯಕ್ಷರಾದ ಸುಭಾಸ್ ಚಂದ್ರ ಕೊಲ್ನಾಡ್ ಉಪಾಧ್ಯಕ್ಷರಾದ ಲೀಲಾ ಮನಮೋಹನ್, ತಾಲೂಕು ಅಧ್ಯಕ್ಷರಾದ ಜಯಪ್ರಕಾಶ್ ನೆಕ್ರಪ್ಪಾಡಿ. ಸ್ಥಳೀಯ ಸಂಸ್ಥೆಯ ಶಾಸಕರಾದ ಮಂಜುನಾಥ್ ಭಂಡಾರಿಯವರ ಆಪ್ತ ಸಹಾಯಕ ರುಕ್ಕು, ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್, ಮಾಜಿ ಅಧ್ಯಕ್ಷರು ಹಾಲಿ ಸದಸ್ಯರುಗಳಾದ ಸೋಮಶೇಖರ್ ಕೊಯಿಂಗಾಜೆ, ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ ಸದಸ್ಯರು ಗಳಾದ ಲಿಸ್ಸಿ ಮೊನಾಲಿಸಾ, ವಿಮಲಾ ಪ್ರಸಾದ್ ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು, ಹೊಂಬೆಳಕು ಕಾರ್ಯಕ್ರಮದ ಸ್ಮರಣ ಸಂಚಿಕೆ ನೀಡಿ.

ಕಳೆದ ಬಾರಿ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ಎಲ್ಲರಿಗೂ ಕ್ರತಜ್ಞತೆ ಸಲ್ಲಿಸಿದರು. ಹಾಗೂ ಮುಂದಿನ ಹೊಂಬೆಳಕು ಕಾರ್ಯಕ್ರಮದ ಬಗ್ಗೆ ಅಭಿಪ್ರಾಯ ಸಂಗ್ರಹಣೆ ಮಾಡಿ ಗ್ರಾಮದ ಅಭಿವೃದ್ಧಿ, ಗ್ರಾಮ ಸ್ವರಾಜ್ ಬಗ್ಗೆ ಹಾಗೂ ತಾಲೂಕಿನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನ rgprs ಸಂಘಟನೆ ಬಲಿಷ್ಠ ಪಡಿಸುವ ಬಗ್ಗೆ ಚರ್ಚಿಸಲಾಯಿತು.