ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ

0

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜು ಮಕ್ಕಳಿಗೆ ಸ್ಪರ್ಧಾ ಕಾರ್ಯಕ್ರಮ ಜು.5ರಂದು ಸುಳ್ಯದ ಎ.ಪಿ.ಎಂ.ಸಿ.‌ ಸಭಾಂಗಣದಲ್ಲಿ ನಡೆಯಿತು.

ಹಿರಿಯ ಪತ್ರಕರ್ತ‌ ಗಂಗಾಧರ ಮಟ್ಟಿಯವರು ಉದ್ಘಾಟನೆ ನೆರವೇರಿಸಿದರು. ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ ಸ್ವಾಗತಿಸಿದರು. ಗೌರವಾಧ್ಯಕ್ಷ ದಯಾನಂದ ಕೊರತ್ತೋಡಿ ವಂದಿಸಿದರು.


ಕೋಶಾಧಿಕಾರಿ ಪ್ರಜ್ಞಾ ಎಸ್. ನಾರಾಯಣ್ ಅಚ್ರಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

ಜು.10ರಂದು ಸುಳ್ಯದ‌ ಕನ್ನಡ ಭವನದಲ್ಲಿ ‌ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.