ಜನರ ಪ್ರೀತಿ, ವಿಶ್ವಾಸಗಳಿಸಿದ ಜಾತ್ಯಾತೀತ ನಾಯಕ ಟಿ.ಎಂ.ಶಹೀದ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
“ಟಿ.ಎಂ.ಶಹೀದ್ ರವರು ಇಲ್ಲಿಯ ಜನರ ಪ್ರೀತಿ, ವಿಶ್ವಾಸ ಗಳಿಸಿರುವ ಜಾತ್ಯಾತೀತ ನಾಯಕ. ಅವರಿಗೆ ರಾಜಕೀಯವಾಗಿ ಉನ್ನತ ಸ್ಥಾನ ಸಿಗಲಿ. ಸಮಾಜಕ್ಕೆ ಇನ್ನಷ್ಟು ಸೇವೆ ಅವರಿಂದ ದೊರೆಯುವಂತಾಗಲಿ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಜು.6ರಂದು ಸುಳ್ಯದ ಬಂಟರ ಭವನದಲ್ಲಿ ನಡೆದ ಸಾಮಾಜಿಕ ಧುರೀಣ ಟಿ.ಎಂ. ಶಹೀದ್ ತೆಕ್ಕಿಲ್ ರವರ ಸಾರ್ವಜನಿಕ ಸನ್ಮಾನ ಕಾರ್ಯಕ್ರಮದಲ್ಲಿ ಅಡಿಕೆ ಗಿಡಕ್ಕೆ ನೀರೆದು ಉದ್ಘಾಟಿಸಿದ ಬಳಿಕ ಮಾತನಾಡಿದರು.
ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ರವರು ಅಭಿನಂದನಾ ಸಂಚಿಕೆ ಬಿಡುಗಡೆ ಮಾಡಿದರು.
55 ಸೇವಾ ಚಟುವಟಿಕೆಗಳಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಚಾಲನೆ ನೀಡಿದರು.
ಟಿ.ಎಂ.ಶಹೀದ್ ರವರ ಕುರಿತು ಗಾಯಕಿ ಸಂಧ್ಯಾ ಮಂಡೆಕೋಲುರವರು ಹಾಡಿದ ಗಾಯನವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆ ಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರುರವರು ಬಿಡುಗಡೆಗೊಳಿಸಿದರು.
ಅರೆಭಾಷೆ ಅಕಾಡೆಮಿ ಅಧ್ಯಕ್ಷ, ಟಿ.ಎಂ.ಶಹೀದ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು.
ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ರನ್ನು ಅದ್ದೂರಿಯಾಗಿ ಅಭಿನಂದಿಸಲಾಯಿತು.
ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಎಂ.ಬಿ.ಸದಾಶಿವ ಅಭಿನಂದನಾ ಮಾತುಗಳನ್ನಾಡಿದರು.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಮುಖ್ಯ ಅತಿಥಿಗಳಾಗಿ ದ್ದರು.
ಅಭಿನಂದನಾ ಸಮಿತಿಯ ಸಂಚಾಲಕ ಕೆ.ಟಿ. ವಿಶ್ವನಾಥ ಸ್ವಾಗತಿಸಿದರು
ಕೆ.ಆರ್. ಗೋಪಾಲಕೃಷ್ಣ ಆಶಯ ಗೀತೆ ಹಾಡಿದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಗಾಂಧಿನಗರ ಪೆಟ್ರೋಲ್ ಬಂಕ್ ಬಳಿಯಿಂದ ವಾಹನ ಜಾಥಾ ನಡೆಯಿತು.